ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 619 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ ಶ್ರೀ ಚಂದ್ರಹಾಸ್ ಶೆಟ್ಟಿ ಮತ್ತು ಶ್ರೀಮತಿ ರೂಪ ಶೆಟ್ಟಿ ದಂಪತಿಗಳ ಪುತ್ರ ಹಕ್ಲಾಡಿ ಸನ್ವಿತ್ ಶೆಟ್ಟಿಯನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀ ಸಾಲ್ಗೆದ್ದ ಶಶಿಧರ್ ಶೆಟ್ಟಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕರುಣಾಕರ್ ಶೆಟ್ಟಿ ನೆಲ್ಯಾಡಿ, ಶಿಕ್ಷಕ ಸುನಿಲ್ ಕುಮಾರ್ ಶೆಟ್ಟಿ ಹಾಗೂ ಸ್ಥಳೀಯ ಗುತ್ತಿಗೆದಾರರಾದ ಸತೀಶ್ ಶೆಟ್ಟಿ ಆಗಮಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಟುಂಬದ ಹಿರಿಯರು ಉಪಸ್ಥಿತರಿದ್ದರು.